ಶಿಕ್ಷಕರ ದಿನಾಚರಣೆ

ಗುರುಬ್ರಹ್ಮ ಗುರುರ್ವಿಷ್ಣು

ಗುರುಃದೇವೋ ಮಹೇಶ್ವರಃ

ಗುರುಸಾಕ್ಷಾತ್ ಪರಃ ಬ್ರಹ್ಮ

ತಸ್ಮೈಶ್ರೀ ಗುರವೇ ನಮಃ….

 ಮಗುವಿನ ಮನಸ್ಸು ಹಸಿ ಮಣ್ಣಿನಂತೆ. ಅದನ್ನು ಎರಡೂ ಕೈಗಳಿಂದ ಆದರದಿಂದ ತಟ್ಟಿ, ತಟ್ಟಿ ಸುಂದರವಾದ, ಕಲಾತ್ಮಕವಾದ ವಿಗ್ರಹ ರೂಪಿಸುವುದು ಗುರುವಿನ ಗುರಿ. ಗುರುವಿಲ್ಲದ ಗುರಿಯು ಕೂಡ ಸಾಧಿಸಲಸದಳ. ಅದಕ್ಕೇ ಹೇಳುವುದು ವಿದ್ಯೆಯು ದುಡ್ಡುಕೊಟ್ಟು ಖರೀದಿಸಬಲ್ಲ ಸೊತ್ತಲ್ಲ. ಅಥವಾ ವಿದ್ಯೆ ಎಂಬುದು ಮಾರಾಟದ ಸೊತ್ತೂ ಅಲ್ಲ. ವಿದ್ಯೆಯನ್ನಂತೂ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವೇ ಇಲ್ಲ

ಬಾಲ್ಯದ ನೆನಪು

    ಈ ದಿನದಂದು ನಮಗೆ ಆಗ ಹಬ್ಬದ ಸಂಭ್ರಮ. ಡಾ. ರಾಧಾಕೃಷ್ಣನ್ ಅವರ ಭಾವಚಿತ್ರವಿರುವ ಚಿಕ್ಕ ಪೋಸ್ಟರ್ ‌‌(ನಾಲ್ಕಾಣೆ ದೇಣಿಗೆ ನೀಡಬೇಕಿತ್ತು)ಗಳನ್ನು ನೋಟ್ ಬುಕ್ ಮೇಲೆ ಅಂಟಿಸಿ ಸಂತಸಪಡುತ್ತಿದ್ದೆವು. ಶಿಕ್ಷಕರ ಕುರಿತು ಮನೆಯಲ್ಲಿ ಅಪ್ಪ ಅಮ್ಮನಿಂದ ಬರೆಯಿಸಿಕೊಂಡು ಬಂದ ಪುಟ್ಟ ಭಾಷಣ ಮಾಡಿ ಸಂತಸಪಡುತ್ತಿದ್ದೆವು- ಇದು ಪ್ರಾಥಮಿಕ ಶಾಲೆಯಲ್ಲಿನ ಸಂಭ್ರಮ.

    ಮುಂದೆ ಮಾಧ್ಯಮಿಕ ಶಾಲೆಗೆ ಬಂದಾಗ, ಶಿಕ್ಷಕ ದಿನಾಚರಣೆಗೆ ಚಿಕ್ಕವರಿದ್ದಾಗ ಕೊಡುತ್ತಿದ್ದ ಗೌರವ ಕೊಂಚ ಕಡಿಮೆಯಾಗಿತ್ತು. ಯಾಕೆಂದರೆ, ಪ್ರಾಥಮಿಕ ಶಾಲೆಯಲ್ಲಿ ಯಾವ ಶಿಕ್ಷಕರು ನಮ್ಮ “ಹೀರೋ”ಗಳಾಗಿ ಕಂಗೊಳಿಸುತ್ತಿದ್ದರೋ, ಅವರು ಈಗ ಕೊಂಚ ದುರ್ಬಲರಾಗಿ ಗೋಚರಿಸತೊಡಗಿದ್ದರು. ಹಾಗಂತ ಅವರಿಗೆ ಗೌರವ ಕೊಡುತ್ತಿರಲಿಲ್ಲವೆಂತಲ್ಲ. ಗೌರವದಲ್ಲಿ ಸ್ವಲ್ಪ ವ್ಯತ್ಯಾಸವಾಗಿರುತ್ತದೆ ಅಷ್ಟೆ.

   ಇನ್ನು ಕಾಲೇಜ್ ಮೆಟ್ಟಿಲು ಹತ್ತಿದಾಗಲಂತೂ ಶಿಕ್ಷಕರು (ಪ್ರಾಧ್ಯಾಪಕ) ಅವರೇನು ಮಹಾ ಎಂಬ ಉಡಾಫೆ ಮನೋಭಾವ ಬೆಳೆದಿರುತ್ತದೆ. ಇಂಥ ಮನೋಭಾವ ಎಲ್ಲರಲ್ಲಿಯೂ ಇರುತ್ತದೆ ಎಂದು ಹೇಳುತ್ತಿಲ್ಲ. ಬಹುಶಃ ನೂರು ಕಾಲೇಜ್ ಹುಡುಗರಲ್ಲಿ ಸುಮಾರು 80ರಷ್ಟು ಹುಡುಗರು ಇದೇ ಮನೋಭಾವ ಹೊಂದಿರಬಹುದೇನೋ. ಹೀಗಿರುವಾಗ ಶಿಕ್ಷಕ ದಿನಾಚರಣೆಯ ಮಹತ್ವ ಹೇಗೆ ಗೊತ್ತಾಗಬೇಕು? ಇಂದು ಇಂದಿನ ಶಿಕ್ಷಣ ವ್ಯವಸ್ಥೆ, ಮಕ್ಕಳ ಮನೋಭಾವ, ಶಿಕ್ಷಣದ ವಾಣಿಜ್ಯೀಕರಣ… ಇತ್ಯಾದಿಗಳ ಪ್ರಭಾವ    

ನಮ್ಮ  ಕಾಲೇಜು ಗ್ರೂಪ್ ಸೇರಲು

Click to join nhce_cse_2008

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s

Follow

Get every new post delivered to your Inbox.